ನಾಗರಿಕರಿಗೆ ಮತ್ತೆ ಶಾಕ್.! ಈರುಳ್ಳಿ ಸೇರಿದಂತೆ ಹಲವು ತರಕಾರಿಗಳ ಬೆಲೆ ಏರಿಕೆ

Prasthutha|

ಬೆಂಗಳೂರು: ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಜನರ ಕೈಗೆಟುಕದಂತೆ ಗಗನಕ್ಕೆ ನೆಗೆದಿದ್ದು, ಕೆಲ ದಿನಗಳ ಹಿಂದಷ್ಟೇ ಹಾಲಿನ ಬೆಲೆ ಏರಿಕೆಯಾಗಿತ್ತು. ಇದೀಗ ಅಡುಗೆಗೆ ಬೇಕಾದ ಈರುಳ್ಳಿ ಸೇರಿದಂತೆ ಹಲವು ತರಕಾರಿಗಳ ಬೆಲೆ ಏಕಾಏಕಿ ಏರಿಕೆಯಾಗತೊಡಗಿದೆ.

- Advertisement -

ಈರುಳ್ಳಿಯ ಬೆಲೆ ಕೇವಲ ಒಂದೇ ವಾರಕ್ಕೆ 10 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ 20 ರಿಂದ 25 ರೂಪಾಯಿ ಆಸುಪಾಸಿನಲ್ಲಿದ್ದ ಈರುಳ್ಳಿಯ ಬೆಲೆ ಈಗ ಕೆಜಿಗೆ 35 ರೂಪಾಯಿ ತಲುಪಿದೆ. ಕೋಸು, ಟೊಮ್ಯಾಟೋ ಸೇರಿದಂತೆ ಇತರೆ ತರಕಾರಿಗಳ ಬೆಲೆಯೂ ಏರಿಕೆ ಆಗಿದ್ದು, ಬಡ ಹಾಗೂ ಮಧ್ಯಮ ವರ್ಗದವರನ್ನು ಕಂಗೆಡಿಸಿದೆ..

ನವೆಂಬರ್ ವೇಳೆಗೆ ಮಾರುಕಟ್ಟೆಗೆ ಹೊಸ ಈರುಳ್ಳಿ ಬರಲಿದ್ದು, ಅಲ್ಲಿಯವರೆಗೂ ಇದೇ ರೀತಿ ಬೆಲೆ ಏರಿಕೆ ಇರಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆಯಾಗುತ್ತಿರುವ ಕಾರಣ ಬೆಳೆ ನಷ್ಟವಾಗಿದ್ದು, ಈ ಕಾರಣಕ್ಕಾಗಿಯೇ ಎಲ್ಲ ತರಕಾರಿಗಳ ಬೆಲೆಯಲ್ಲಿ ಏರಿಕೆಯಾಗಿದೆ ಎಂದು ಹೇಳಲಾಗಿದೆ.

Join Whatsapp