ಪ್ರಜ್ವಲ್ ರೇವಣ್ಣ ಪ್ರಕರಣ: ಎಸ್‌ಐಟಿ ಪರ ನೇಮಕವಾಗಿದ್ದ ಮತ್ತೋರ್ವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀನಾಮೆ

Prasthutha|

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಎಸ್‌ಐಟಿ ಪರವಾಗಿ ವಾದಿಸೋದಕ್ಕೆ ಹೆಚ್ಚುವರಿ ಎಸ್‌ಪಿಪಿ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ನೇಮಿಸಲಾಗಿದ್ದ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ.

- Advertisement -

ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ಮತ್ತೋರ್ವ ಎಸ್​ಪಿಪಿ ಹುದ್ದೆಗೆ ರಾಜೀನಾಮೆ ನೀಡಿದಂತಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ಪರ ವಾದ ಮಂಡಿಸಲು ರಾಜ್ಯ ಸರ್ಕಾರ ನೇಮಿಸಿದ್ದ ಬಿಎನ್ ಜಗದೀಶ ಎಸ್​ಪಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧದ ಮಹಿಳೆ ಕಿಡ್ನ್ಯಾಪ್ ಪ್ರಕರಣ, ಭವಾನಿ ರೇವಣ್ಣ ವಿರುದ್ಧದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಕುರಿತು ನ್ಯಾಯಾಲಯದಲ್ಲಿ ಹೆಚ್ಚುವರಿ ಎಸ್ ಪಿಪಿಯಾಗಿ ಜಾಯ್ನಾ ಕೊಥಾರಿ ಸಮರ್ಥವಾಗಿಯೇ ವಾದಿಸಿದ್ದರು.

- Advertisement -

ಪ್ರಜ್ವಲ್, ರೇವಣ್ಣ, ಭವಾನಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ವೇಳೆಯಲ್ಲಿ ಎಸ್‌ಐಟಿ ಪರವಾಗಿ ಹೆಚ್ಚುವರಿ ಎಸ್ ಪಿಪಿಯಾಗಿ ವಾದಿಸಿದ್ದ ಜಾಯ್ನಾ ಕೊಥಾರಿ, ಜಾಮೀನು ನೀಡದಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ಎಸ್‌ಐಟಿ ಅಧಿಕಾರಿಗಳ ವಶಕ್ಕೆ ನೀಡುವಂತೆಯೂ ಕೋರಿದ್ದರು. ಈ ರೀತಿಯಾಗಿ ವಾದಿಸಿದ್ದಂತ ಹೆಚ್ಚುವರಿ ಎಸ್‌ಪಿಪಿ ಜಾಯ್ನಾ ಕೊಥಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ.

Join Whatsapp
Exit mobile version