ಶಿವಮೊಗ್ಗದಲ್ಲಿ ಮತ್ತೊಂದು ಚೂರಿ ಇರಿತ: ಸ್ಥಳದಲ್ಲಿ ಹೆಚ್ಚಿದ ಉದ್ವಿಗ್ನತೆ

Prasthutha|

ತೀರ್ಥಹಳ್ಳಿ: ಸಾವರ್ಕರ್ ಫೋಟೋ ತೆರವುಗೊಳಿಸಿದ ಘಟನೆಯ ಬಳಿಕ ಎರಡು ಗಂಟೆಯ ಅವಧಿಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಚೂರಿಯಿಂದ ಇರಿದ ಘಟನೆ ವರದಿಯಾಗಿದೆ.

ಸದ್ಯ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಮುಂದುವರಿದಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪರಿಸ್ಥಿತಿಯ ನಿಯಂತ್ರಣಕ್ಕೆ ಜಿಲ್ಲಾಡಳಿತ ನಿಷೇಧಾಜ್ಞೆ ಹೇರಿದೆ.

- Advertisement -

ಚೂರಿ ಇರಿತಕ್ಕೊಳಗಾದವರನ್ನು ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದ್ದು, ಶಿವಮೊಗ್ಗದ ಅಶೋಕ‌ನಗರ ಬಡಾವಣೆಯಲ್ಲಿ ಈ ಕೃತ್ಯ ನಡೆದಿದೆ.

ಇದಕ್ಕೂ ಮೊದಲು ಶಿವಮೊಗ್ಗದ ಉಪ್ಪಾರ ಕೇರಿಯಲ್ಲಿ ಪ್ರೇಮ್ ಸಿಂಗ್ ಎಂಬವರ ಮೇಲೆ ಚೂರಿಯಿಂದ ಇರಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

- Advertisement -