Home ಟಾಪ್ ಸುದ್ದಿಗಳು ಬಿಷ್ಣೋಯಿ ಗ್ಯಾಂಗ್ ನಿಂದ ಸಲ್ಮಾನ್ ಖಾನ್ ಗೆ ಮತ್ತೊಂದು ಬೆದರಿಕೆ ಸಂದೇಶ

ಬಿಷ್ಣೋಯಿ ಗ್ಯಾಂಗ್ ನಿಂದ ಸಲ್ಮಾನ್ ಖಾನ್ ಗೆ ಮತ್ತೊಂದು ಬೆದರಿಕೆ ಸಂದೇಶ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನಿಂದ ಮತ್ತೊಮ್ಮೆ ಬೆದರಿಕೆ ಸಂದೇಶ ಬಂದಿದೆ.


ಗುರುವಾರ ತಡರಾತ್ರಿ ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಮ್ ಗೆ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.


ಎರಡು ದಿನಗಳ ಹಿಂದಷ್ಟೇ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆಯೊಡ್ಡಿದ್ದ ಆರೋಪದಡಿ ಬಿಖಾ ರಾಮ್ ಅಲಿಯಾಸ್ ವಿಕ್ರಮ್ (32) ಎಂಬುವವರನ್ನು ಹಾವೇರಿ ಜಿಲ್ಲಾ ಪೊಲೀಸರು ಬಂಧಿಸಿದ್ದು, ಮುಂಬೈನ ಭಯೋತ್ಪಾದನಾ ನಿಗ್ರಹ ಪಡೆಯ ವಶಕ್ಕೆ ಒಪ್ಪಿಸಿದ್ದರು.

Join Whatsapp
Exit mobile version