ಹಾವೇರಿಯಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ: 7 ಜನರ ಬಂಧನ

Prasthutha|

ಹಾವೇರಿ: ಹಾನಗಲ್‌ ತಾಲ್ಲೂಕಿನಲ್ಲಿ ಮತ್ತೊಂದು ಅನೈತಿಕ ಪೊಲೀಸ್‌ಗಿರಿ ಘಟನೆ ನಡೆದಿದ್ದು, ಬ್ಯಾಡಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, 7 ಆರೋಪಿಗಳನ್ನು ಬಂಧಿಸಿದ್ದೇವೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.ಅವರ ಬಂಧನಕ್ಕೆ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಂಶುಕುಮಾರ್‌ ತಿಳಿಸಿದ್ದಾರೆ.

- Advertisement -

ಬ್ಯಾಡಗಿ ತಾಲ್ಲೂಕಿನ ಅಗಸನಹಳ್ಳಿಗೆ ಹಬ್ಬಕ್ಕಾಗಿ ತನ್ನ ಜೊತೆ ಕೆಲಸ ಮಾಡುತ್ತಿದ್ದ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಬೈಕ್‌ನಲ್ಲಿ ತೆರಳಿದ್ದರು.

ಮಾರ್ಗ ಮಧ್ಯೆ ಮಾತನಾಡುತ್ತಾ ನಿಂತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಮುಸ್ಲಿಂ ಯುವಕರ ಗುಂಪು, ಹಿಂದೂ ಯುವಕನ ಜೊತೆ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

- Advertisement -

ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಕ್ಕೆ ಹೊಡೆದು ಎಳೆದಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.



Join Whatsapp