Home ಟಾಪ್ ಸುದ್ದಿಗಳು ಗೋಹತ್ಯೆ ನಿಷೇಧ ಕಾಯ್ದೆ ಸಂಪೂರ್ಣ ನಿಷೇಧ ಮಾಡುವುದಿಲ್ಲ: ರಿಝ್ವಾನ್ ಅರ್ಷದ್

ಗೋಹತ್ಯೆ ನಿಷೇಧ ಕಾಯ್ದೆ ಸಂಪೂರ್ಣ ನಿಷೇಧ ಮಾಡುವುದಿಲ್ಲ: ರಿಝ್ವಾನ್ ಅರ್ಷದ್

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಸಂಪೂರ್ಣ ನಿಷೇಧ ಮಾಡುವುದಿಲ್ಲ, ನಿಯಮಗಳನ್ನು ಸಡಿಲಿಕೆ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ರಿಝ್ವಾನ್ ಅರ್ಷದ್ ಹೇಳಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಸಂಪೂರ್ಣ ನಿಷೇಧ ಮಾಡುವುದಿಲ್ಲ, ಬದಲಾವಣೆ ಮಾಡಲಾಗುತ್ತೆ. ನಮ್ಮ ರಾಜ್ಯದ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಅದನ್ನು ಅಪ್ ಗ್ರೇಡ್ ಮಾಡಲಾಗುತ್ತೆ ಎಂದರು.

ಈ ಕಾಯ್ದೆಯ ಮೂಲಕ ಬಿಜೆಪಿಯವರ ಸಂಘಟನೆಗಳು ವಸೂಲಿ ದಂಧೆ ಮಾಡಿಕೊಂಡಿದ್ದರು. ನಾವು ಕಾಯ್ದೆಯ ಕೆಲವು ನಿಯಮಗಳನ್ನು ಸಡಿಲಗೊಳಿಸಲಿದ್ದೇವೆ ಎಂದು ಹೇಳಿದ್ದಾರೆ.

Join Whatsapp
Exit mobile version