ಕಲಬುರಗಿ: 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವನ್ನು ಕಾಂಗ್ರೆಸ್ ಸರಕಾರ ನೀಡಿಲ್ಲ. ಇದು ರೈತವಿರೋಧಿಗಳ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನೆರೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಪರಿಹಾರ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಿ ಕೂಡಲೇ ಬಿಡುಗಡೆ ಮಾಡಿದ್ದರು. ಸಿದ್ದರಾಮಯ್ಯನವರಂತೆ ದೆಹಲಿಯಲ್ಲಿ ಪ್ರತಿಭಟನೆ ಮಾಡಿರಲಿಲ್ಲ ಎಂದು ಟೀಕಿಸಿದರು.
ರೈತರಿಗೆ ಪರಿಹಾರ ಕೊಡಿ ಎಂದರೆ ಕೇಂದ್ರವನ್ನು ದೂರುತ್ತಾರೆ. ನಿಮ್ಮ ಯಡಿಯೂರಪ್ಪನವರು ಸಿಎಂ ಆಗಿದ್ದಾಗ ತಕ್ಷಣವೇ ಬೆಳೆ ನಾಶಕ್ಕೆ ಪ್ರತಿ ಹೆಕ್ಟೇರಿಗೆ 14 ಸಾವಿರ ರೂ., ತೋಟಗಾರಿಕಾ ಬೆಳೆಗೆ 24 ಸಾವಿರ ನೀಡಿದ್ದರು. ಈಗ ಸಿದ್ದರಾಮಯ್ಯನವರು 2 ಸಾವಿರ ಭಿಕ್ಷೆಯಂತೆ ನೀಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.