ಕೊಲ್ಕತಾ : ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಮಂಡಿಸಲು ಪಶ್ಚಿಮ ಬಂಗಾಳ ಕೂಡ ವಿಶೇಷ ಅಧಿವೇಶನ ನಡೆಸಲಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈಗಾಗಲೇ ಕೇರಳದಲ್ಲಿ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಲಾಗಿದೆ.
“ಮೂರು ನೂತನ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಶೇಷ ಅಧಿವೇಶನ ನಡೆಸಲಾಗುವುದು. ನಾನು ರೈತರ ಪರ ಇದ್ದೇನೆ. ದೇಶ ಹಾಗೂ ರೈತರ ಹಿತದೃಷ್ಟಿಯಿಂದ ಈ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಬ್ಯಾನರ್ಜಿ ಹೇಳಿದ್ದಾರೆ.
ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಕೇರಳ ಸೇರಿದಂತೆ ಈಗಾಗಲೇ ಐದು ರಾಜ್ಯಗಳು ನಿರ್ಣಯ ಕೈಗೊಂಡಿವೆ. ಈ ಕುರಿತು ಅಧಿವೇಶನ ಕರೆಯುವಂತೆ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಮಮತಾ ಸರಕಾರವನ್ನು ಒತ್ತಾಯಿಸಿದ್ದವು.