Home ಟಾಪ್ ಸುದ್ದಿಗಳು ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಭವಾನಿ ರೇವಣ್ಣ ಬಂಧನ ಸಾಧ್ಯತೆ

ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಭವಾನಿ ರೇವಣ್ಣ ಬಂಧನ ಸಾಧ್ಯತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಆರು ದಿನ ಎಸ್​​ಐಟಿ ವಶಕ್ಕೆ ಒಳಗಾದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಮಗನ ಲೈಂಗಿಕ ದೌರ್ಜನ್ಯ ಸಂಬಂಧವಾಗಿ ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಪೊಲೀಸರು ಭವಾನಿ ಅವರಿಗೆ ತನಿಖೆಗೆ ಹಾಜರಾಗುವಂತೆ 15 ದಿನಗಳ ಹಿಂದೆ ನೋಟಿಸ್​ ನೀಡಿದ್ದರು. ಅದಕ್ಕೆ ಪ್ರತಿಕ್ರಿಯಿಸದ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಏತನ್ಮಧ್ಯೆ ಶುಕ್ರವಾರ ಬೆಳಗ್ಗೆ ಎಸ್​ಐಟಿ ಅಧಿಕಾರಿಗಳೂ ಭವಾನಿ ಅವರಿಗೆ ಎರಡನೇ ನೋಟಿಸ್​ ನೀಡಿದ್ದರು. ಅವರು ಮನೆಯಲ್ಲಿ ಇಲ್ಲದ ಕಾರಣ ನೋಟಿಸ್ ಅಂಟಿಸಿ ಬಂದಿದ್ದರು. ಇದೀಗ ಕೋರ್ಟ್​​ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಭವಾನಿ ರೇವಣ್ಣರನ್ನು ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

Join Whatsapp
Exit mobile version