TMC ಸೇರ್ಪಡೆಯಾದ ಬೆನ್ನಲ್ಲೇ ರಾಹುಲ್ ಗಾಂಧಿ ‌ಕ್ಷಮೆಯಾಚಿಸಿದ ಅನ್ವರ್

Prasthutha|

ತಿರುವನಂತಪುರ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಟಿಎಂಸಿ ಸೇರ್ಪಡೆಯಾಗಿರುವ ಪಿ.ವಿ.ಅನ್ವರ್‌ ಅವರು ‘ಡಿಎನ್‌ ಎ’ ಹೇಳಿಕೆ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಲ್ಲಿ ಕ್ಷಮೆಯಾಚಿಸಿದ್ದಾರೆ.

- Advertisement -

ಕಳೆದ ವರ್ಷ ಪಾಲಕ್ಕಾಡ್‌ ನಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ್ದ ಅನ್ವರ್ ಅವರು, ನೆಹರೂ ವಂಶಸ್ಥರಿಂದ ನಿರೀಕ್ಷಿಸುವ ಗುಣಮಟ್ಟವನ್ನು ರಾಹುಲ್ ಗಾಂಧಿ ಅವರು ಪ್ರದರ್ಶಿಸುತ್ತಿಲ್ಲ. ಈ ಕಾರಣಕ್ಕೆ ಅವರ ಡಿಎನ್‌ ಎ ಅನ್ನು ಪರೀಕ್ಷಿಸಬೇಕಿದೆ’ ಎಂದು ಹೇಳಿದ್ದರು.

‘ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ವಿರುದ್ಧ ಕೇಂದ್ರ ತನಿಖಾ ತಂಡಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದು, ಬಿಜೆಪಿಯೇತರ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ತನಿಖಾ ತಂಡಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವ ಕಾಂಗ್ರೆಸ್ ಪಕ್ಷದ ನಿಲುವಿಗೆ ವಿರುದ್ಧವಾಗಿದೆ. ಹಾಗಾಗಿ ರಾಹುಲ್ ಗಾಂಧಿ ಅವರ ರಾಜಕೀಯ ಡಿಎನ್‌ ಎ ಪರೀಕ್ಷಿಸುವ ಅಗತ್ಯವಿದೆ ಎಂದು ನಾನು ಹೇಳಿದ್ದೆ. ನಾನು ಜೈವಿಕ ಡಿಎನ್ಎ ಬಗ್ಗೆ ಮಾತನಾಡಿಲ್ಲ. ನೆಹರೂ ಕುಟುಂಬದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕುಟುಂಬದಿಂದ ನಾನು ಬಂದಿದ್ದು, ಅಂತಹ ಹೇಳಿಕೆ ನೀಡಲು ಸಾಧ್ಯವೂ ಇಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ’ ಎಂದು ಅನ್ವರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.



Join Whatsapp