ಅನ್ವರ್ ಹತ್ಯೆ ಪ್ರಕರಣ: ಹಂತಕರನ್ನು ಬಂಧಿಸಿ, ಇಲ್ಲ ದಯಾಮರಣ ಕೊಡಿ

Prasthutha|

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಪ್ತ ಅನ್ವರ್ ಹತ್ಯೆಯಾಗಿ 5 ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ಹಾಗಾಗಿ ಹಂತಕರ ಬಂಧನ ಮಾಡದ ಹಿನ್ನೆಲೆ ಅನ್ವರ್ ಕುಟುಂಬ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

- Advertisement -

5 ವರ್ಷದ ಹಿಂದೆಯೇ ಬಿಜೆಪಿ ಮುಖಂಡ ಹಾಗೂ ಸಿ.ಟಿ ರವಿ ಆಪ್ತನಾಗಿದ್ದ ಅನ್ವರ್ ನನ್ನು ನಗರದ ಗೌರಿ ಕಾಲುವೆ ಬಳಿ ಚಾಕುವಿನಿಂದ 13 ಬಾರಿ ಇರಿದು ಹತ್ಯೆ ಮಾಡಲಾಗಿತ್ತು. ಹತ್ಯೆಗೊಳಗಾದ ಅನ್ವರ್ ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ.

ಬಿಜೆಪಿ ಸರ್ಕಾರ ಇದ್ದಾಗಲೂ ಸರಿಯಾದ ತನಿಖೆ ನಡೆಸಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನ್ವರ್ ಹತ್ಯೆ ಪ್ರಕರಣವನ್ನ ಹಿಂದಿನ ಬಿಜೆಪಿ ಸರ್ಕಾರ ಸಿಐಡಿಗೆ ಒಪ್ಪಿಸಿದ್ದರು. 5 ವರ್ಷವಾದರೂ ಹಂತಕರನ್ನು ಬಂಧಿಸಿಲ್ಲ. ಹಾಗಾಗಿ ದಯಾಮರಣ ನೀಡಿ ಎಂದು ರಾಷ್ಟ್ರಪತಿಗೆ ಪತ್ರ ಬರೆಯಲಾಗಿದೆ.