ಆಂಧ್ರ ಪ್ರದೇಶ: ವಿಶಾಖಪಟ್ಟಣಂ ಫಾರ್ಮಾ ಘಟಕದಲ್ಲಿ ಸ್ಫೋಟ; 5 ಮಂದಿಗೆ ಗಂಭೀರ ಗಾಯ

Prasthutha|

ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಹೆಟೆರೋ ಔಷಧ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ವಿಶಾಖಪಟ್ಟಣಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ರಾತ್ರಿ ನಕ್ಕಪಲ್ಲಿನಲ್ಲಿರುವ ಔಷಧ ತಯಾರಿಕ ಘಟಕದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡದ ಬಳಿಕ ಸ್ಥಾವರ ತನ್ನ ಕೆಲಸವನ್ನು ಸ್ಥಗಿತಗೊಳಿಸಿದೆ.

- Advertisement -

ಗಾಯಗೊಂಡವರಲ್ಲಿ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ವಿಶಾಖಪಟ್ಟಣಕ್ಕೆ ಸ್ಥಳಾಂತರಿಸಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

Join Whatsapp