ಮಡಿಕೇರಿ: 50 ಲಕ್ಷ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅಪ್ಪಚ್ಚು ರಂಜನ್ ಚಾಲನೆ

Prasthutha|

ಮಡಿಕೇರಿ : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಗರದ ತ್ಯಾಗರಾಜ ಕಾಲೋನಿ ಕೊಳಚೆ ಪ್ರದೇಶದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಸುಮಾರು 50 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.  

- Advertisement -

ಬಳಿಕ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ತ್ಯಾಗರಾಜ ಕಾಲೋನಿಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಡಾಂಬರ್ ರಸ್ತೆ ಹಾಗೂ ಚರಂಡಿ ಕಾಮಗಾರಿ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದರು.

‘ನಗರೋತ್ಥನ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಡಿಕೇರಿ ನಗರಕ್ಕೆ ೪೦ ಕೋಟಿ ರೂ. ಬಿಡುಗಡೆಗೆ ಒಪ್ಪಿದ್ದು, ಆ ದಿಸೆಯಲ್ಲಿ ನಗರೋತ್ಥಾನ ಕಾಮಗಾರಿ ಅಗತ್ಯ ಅಂದಾಜು ಪಟ್ಟಿಯ ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಶಾಸಕರು ತಿಳಿಸಿದರು.’  

- Advertisement -

ಸೋಮವಾರಪೇಟೆಯ ಹಾಕಿ ಟರ್ಪ್ ಕಾಮಗಾರಿ ಬಗ್ಗೆಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್ ಅವರು ಕ್ರೀಡಾ ಸಚಿವರಾಗಿದ್ದ ಸಂದರ್ಭದಲ್ಲಿ 5 ಕೋಟಿ ರೂ. ಬಿಡುಗಡೆ ಮಾಡಿಸಲಾಗಿತ್ತು, ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಇನ್ನೂ ಒಂದು ತಿಂಗಳಲ್ಲಿ ಸೋಮವಾರಪೇಟೆಯ ಹಾಕಿ ಟರ್ಪ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕರು ತಿಳಿಸಿದರು.

ಹೆಚ್ಚುವರಿ ಕಾಮಗಾರಿಗೆ ೮೦ ಲಕ್ಷ ರೂ. ಬೇಕಿದ್ದು ಬಿಡುಗಡೆ ಮಾಡಿಸಲಾಗುವುದು ಎಂದು ಶಾಸಕರು ತಿಳಿಸಿದರು. ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಉಪಾಧ್ಯಕ್ಷರಾದ ಸವಿತಾ ರಾಕೇಶ್, ಸದಸ್ಯರಾದ ಕೆ.ಎಸ್.ರಮೇಶ್, ಮಹೇಶ್ ಜೈನಿ, ಚಿತ್ರಾವತಿ, ಮನ್ಸೂರ್ ಅಲಿ, ಎಸ್.ಇ.ಸತೀಶ್, ಅಮೀನ್ ಮೊಹಿಸಿನ್, ಕಲಾವತಿ, ಉಮೇಶ್ ಸುಬ್ರಮಣಿ, ಅಪ್ಪಣ್ಣ, ಶ್ವೇತಾ, ಸಬಿತಾ ಇತರರು ಇದ್ದರು.



Join Whatsapp