Home ಟಾಪ್ ಸುದ್ದಿಗಳು ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಪ್ರಶ್ನಿಸಿ ಮೇಲ್ಮನವಿ: ಆದೇಶ ಕಾಯ್ದಿರಿಸಿದ ಸುಪ್ರೀಮ್ ಕೋರ್ಟ್

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಪ್ರಶ್ನಿಸಿ ಮೇಲ್ಮನವಿ: ಆದೇಶ ಕಾಯ್ದಿರಿಸಿದ ಸುಪ್ರೀಮ್ ಕೋರ್ಟ್

ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹೇರಲಾಗಿದ್ದ ಹಿಜಾಬ್ ನಿಷೇಧ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್’ಗೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಮುಗಿದಿದ್ದು, ತೀರ್ಪನ್ನು ಕಾಯ್ದಿರಿಸಿದೆ.

ಮಾರ್ಚ್ 15ರಂದು ಉಡುಪಿಯ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನ ಮುಸ್ಲಿಮ್ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ ಹಿಜಾಬ್ ಇಸ್ಲಾಮಿನ ಅಗತ್ಯ ಭಾಗವಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್’ಗೆ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು, ಈ ಪ್ರಕರಣದ ತೀರ್ಪನ್ನು ಕಾಯ್ದಿರಿಸಿದೆ.

Join Whatsapp
Exit mobile version