Home ಕರಾವಳಿ ಶಿಕ್ಷಕಿ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಶಿಕ್ಷಕಿ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ಜಿಲ್ಲಾ ಮಟ್ಟದ ಉದ್ಯೋಗಸ್ಥ ಮಹಿಳೆಯರ ಮತ್ತು ಎರಡು ತಾಲೂಕು ಕೇಂದ್ರಗಳಲ್ಲಿ ಕಾರ್ಮಿಕ ಮಹಿಳೆಯರ 0-6 ವರ್ಷದೊಳಗಿನ ಮಕ್ಕಳ ಶಿಶುಪಾಲನಾ ಕೇಂದ್ರಕ್ಕೆ ಮಹಿಳಾ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.


ನರ್ಸರಿ ಶಿಕ್ಷಕರ ತರಬೇತಿ ಹಾಗೂ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಉಳ್ಳಾಲ ತಾಲೂಕು, ಮೂಡಬಿದ್ರೆ ತಾಲೂಕು ಹಾಗೂ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸಂಬಂಧಿಸಿದ 20 ರಿಂದ 40 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಅರ್ಜಿಯನ್ನು ಮಂಗಳೂರು ನಗರದ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್ ಕಟ್ಟಡ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪಡೆದು ಜು.25ರೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗೆ ದೂ.ಸಂಖ್ಯೆ: 08242451254 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿಸದ್ದಾರೆ.

Join Whatsapp
Exit mobile version