Home ಟಾಪ್ ಸುದ್ದಿಗಳು ಡಿಸಿಎಂಗಳ ನೇಮಕ ಹೈಕಮಾಂಡ್ ಗೆ ಬಿಟ್ಟಿದ್ದು: ಪರಮೇಶ್ವರ್

ಡಿಸಿಎಂಗಳ ನೇಮಕ ಹೈಕಮಾಂಡ್ ಗೆ ಬಿಟ್ಟಿದ್ದು: ಪರಮೇಶ್ವರ್

ಬೆಂಗಳೂರು : ಹೆಚ್ಚು ಡಿಸಿಎಂಗಳ ನೇಮಕ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು, ಆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.


ಈ ಬಗ್ಗೆ ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, ನಾವು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದರು.


ಬಿಜೆಪಿ ನಾಯಕರ ರಿವರ್ಸ್ ಆಪರೇಷನ್ ವಿಚಾರವಾಗಿ ಪ್ರತಿಕ್ರಿಯಿಸಿ, ಎಲ್ಲವೂ ಗೊತ್ತಾಗುತ್ತದೆ, ಸ್ವಲ್ಪ ದಿನದಲ್ಲೇ ನೋಡಿ. ಯಾರ ಸಂಪರ್ಕದಲ್ಲಿ ಯಾರಿದ್ದಾರೆ ಅನ್ನೋದು ತಿಳಿಯಲಿದೆ ಎಂದು ಹೇಳಿದರು.

Join Whatsapp
Exit mobile version