ಹೊಸದಿಲ್ಲಿ: ತಮಿಳುನಾಡು, ಉತ್ತರಾಖಂಡ್, ಪಂಜಾಬ್ ಸೇರಿದಂತೆ ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕಗೊಳಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಗುರ್ಮೀತ್ ಸಿಂಗ್ ಉತ್ತರಾಖಂಡ್ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದು, ನಾಗಲ್ಯಾಂಡ್ ರಾಜ್ಯದ ಮಾಜಿ ರಾಜ್ಯಪಾಲ ಆರ್.ಎನ್.ರವಿ ತಮಿಳುನಾಡಿನ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಪಂಜಾಬ್ ರಾಜ್ಯದ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯಪಾಲರಾಗಿ ಆಯ್ಕೆಯಾಗಿದ್ದಾರೆ. ಅಸ್ಸಾಂನ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ನಾಗಾಲ್ಯಾಂಡ್‌ನ ಉಸ್ತುವಾರಿ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.