Home ಟಾಪ್ ಸುದ್ದಿಗಳು ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ: SDPI ಅಭಿನಂದನೆ

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ: SDPI ಅಭಿನಂದನೆ

ಉಳ್ಳಾಲ: ಉಳ್ಳಾಲ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೊಹಲ್ಲಾಗಳ ಸಂಯುಕ್ತ ಖಾಝಿಯಾಗಿ ಆಯ್ಕೆಯಾದ ಇಂಡಿಯನ್ ಗ್ರಾಂಡ್ ಮುಫ್ತಿ ಬಹುಮಾನ್ಯರಾದ ಶೈಖುನಾ ಕಾಂತಪುರಂ ಎ ಪಿ ಅಬೂಬಕ್ಕರ್ ಮುಸ್ಲಿಯಾರ್‌ರವರನ್ನು SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಅಭಿನಂದಿಸಿದ್ದಾರೆ.

ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದೇಶಾದ್ಯಂತ ಕ್ರಾಂತಿ ಮೂಡಿಸಿದ ಶೈಖುನಾರವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಇಸ್ಲಾಂ ಧರ್ಮದ ಆಧ್ಯಾತ್ಮಿಕ ಪಂಡಿತರಾಗಿದ್ದಾರೆ. ಸಾವಿರಾರು ಸಂಖ್ಯೆಯ ಬಡ ಮತ್ತು ನಿರ್ಗತಿಕ ಮಕ್ಕಳಿಗೆ ಧಾರ್ಮಿಕ ಮತ್ತು ಲೌಕಿಕ ಶಿಕ್ಷಣಕ್ಕೆ ವ್ಯವಸ್ಥೆ ಕಲ್ಪಿಸಿ ಅವರನ್ನು ಸಮುದಾಯ ಮತ್ತು ಸಮಾಜದ ಮುಖ್ಯವಾಹಿನಿಗೆ ಸಮರ್ಪಿಸುವ ಮೂಲಕ ಸುಶಿಕ್ಷಿತ ಸಮಾಜವನ್ನು ನಿರ್ಮಿಸಲು ಅಬೂಬಕ್ಕರ್ ಮುಸ್ಲಿಯಾರ್‌ರವರ ಕೊಡುಗೆ ಅಪಾರವಾಗಿದೆ. ದೇಶಾದ್ಯಂತ ಲಕ್ಷಾಂತರ ಸಂಖ್ಯೆಯ ಅನುಯಾಯಿಗಳನ್ನು, ವಿದ್ಯಾರ್ಥಿಗಳನ್ನು ಹೊಂದಿರುವ ಶೈಖುನಾ ರವರು ಉಳ್ಳಾಲದ ಖಾಝಿಯಾಗಿ ಆಯ್ಕೆಯಾಗಿರುವುದು ಕರಾವಳಿ ಕರ್ನಾಟಕದ ಸಮಸ್ತ ನಾಗರಿಕರಿಗೂ ಸಂತಸ ತಂದಿದೆ. ಎಂದು ಅನ್ವರ್ ಸಾದತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version