Home ಟಾಪ್ ಸುದ್ದಿಗಳು ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.


ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಲಾ ಶಿಕ್ಷಕರ ಸಂಘಟನೆಗಳ ನಿಯೋಗದ ಜೊತೆ ಸಭೆ ನಡೆಯಿತು.


ಸಭೆಯಲ್ಲಿ ಹಲವು ಬೇಡಿಕೆಗಳನ್ನ ಶಿಕ್ಷಕರು ಮುಂದಿಟ್ಟಿದ್ದು, ಒಂದು ತಿಂಗಳ ಒಳಗಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ನೀಡಿದರು. ಸಭೆಯಲ್ಲಿ ತಮ್ಮ ಬೇಡಿಕೆಗಳನ್ನ ನಿಯೋಗ ಸಿಎಂಗೆ ಮಂಡಿಸಿತು. 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು ಎಂದು ಹೇಳಿತು.

Join Whatsapp
Exit mobile version