ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಕುರಿತು ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

- Advertisement -


ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ, ಮಂಗಳವಾರ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಫಾರೆಸ್ಟ್ ಇಲ್ಲದವರು ಮಿನಿಸ್ಟರ್ ಅಗಿದ್ದಾರೆ. ಅವರಿಗೆ ಮರ- ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ, ಮರದ ನೆರಳು ಗೊತ್ತಿಲ್ಲ..ಸುಟ್ಟು ಕರಕಲಾಗಿರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ, ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆʼʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

- Advertisement -

Join Whatsapp