ಹೊಸಪೇಟೆ: ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕಲ್ಲಿನ ರಾಶಿ ಎಲ್ಲಿಂದ ಬಂತು? ಹೇಗೆ ಬಂತು? ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾರು ಈ ಘಟನೆಯಲ್ಲಿ ಭಾಗಿಯಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಯಾರೇ ಮಾಡಿರಲಿ, ಯಾವುದಕ್ಕೇ ಮಾಡಿರಲಿ ಎಲ್ಲದಕ್ಕೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಮತ, ಧರ್ಮದವರೇ ಆಗಿದ್ದರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಪ್ರತಿಭಟನೆ ಮಾಡುವ ಹಕ್ಕು ಸಾರ್ವಜನಿಕರಿಗೆ ಇದೆ. ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡಿ, ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧ. ಇದು ಆಕಸ್ಮಿಕವಾಗಿ ನಡೆದ ಘಟನೆ. ಆದರೆ, ಒಂದೂವರೆ ಗಂಟೆಯಲ್ಲಿ ಪೊಲೀಸರು ತಹಬದಿಗೆ ತಂದಿದ್ದಾರೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.