ಭೂ ಮಂಜೂರಾತಿ ಫಲಾನುಭವಿಗಳಾಗಿ ಅರ್ಹತೆಗಳಿಸಲು ವಾರ್ಷಿಕ ಆದಾಯ ಮಿತಿ ಹೆಚ್ಚಿಸುವಂತೆ ಅರಗ ಜ್ಞಾನೇಂದ್ರ ಮನವಿ

Prasthutha|

ಬೆಂಗಳೂರು: ಕರ್ನಾಟಕ ಭೂ ಕಂದಾಯ ಕಾಯಿದೆ – 1964ರ 94 ಸಿ ಅಡಿ ಸಾರ್ವಜನಿಕರು ಭೂ ಮಂಜೂರಾತಿ ಫಲಾನುಭವಿಗಳಾಗಿ ಅರ್ಹತೆ ಗಳಿಸಲು ಪ್ರಸ್ತುತ ಇರುವ ಗರಿಷ್ಠ ವಾರ್ಷಿಕ ಆದಾಯ ಮಿತಿಯನ್ನು 30 ಸಾವಿರ ರೂಪಾಯಿಯಿಂದ ಗರಿಷ್ಠ 1 ಲಕ್ಷದ 20 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

- Advertisement -

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ ಅವರಿಗೆ ಪತ್ರ ಬರೆದಿರುವ ಅವರು, ಕರ್ನಾಟಕ ಭೂ ಕಂದಾಯ ಕಾಯಿದೆ 1964ರ 94 ಸಿ ಗೆ ತಿದ್ದುಪಡಿ ತರಬೇಕು. ಬಿಪಿಎಲ್ ಪಡಿತರ ಸೌಲಭ್ಯ ಪಡೆಯಲೂ ಸಹ ಪ್ರಸ್ತುತ 1 ಲಕ್ಷದ 20 ಸಾವಿರ ರೂಪಾಯಿ ಆದಾಯ ನಿಗದಿ ಪಡಿಸಲಾಗಿದೆ ಎಂದು ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Join Whatsapp