Home ಟಾಪ್ ಸುದ್ದಿಗಳು ಸಿಎಂ ಸಿದ್ದರಾಮಯ್ಯರನ್ನು ಇಳಿಸಿದರೆ ಪಕ್ಷವನ್ನೇ ಮುಳುಗಿಸುವ ಭಯವೇ?: ಡಿಕೆಶಿಗೆ ಅಶೋಕ ಪ್ರಶ್ನೆ

ಸಿಎಂ ಸಿದ್ದರಾಮಯ್ಯರನ್ನು ಇಳಿಸಿದರೆ ಪಕ್ಷವನ್ನೇ ಮುಳುಗಿಸುವ ಭಯವೇ?: ಡಿಕೆಶಿಗೆ ಅಶೋಕ ಪ್ರಶ್ನೆ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಅವರು ಇಡೀ ಕಾಂಗ್ರೆಸ್ ಪಕ್ಷವನ್ನೇ ಮುಳುಗಿಸಿ ಬಿಡುತ್ತಾರೆ ಅನ್ನುವ ಭಯವೇ ನಿಮಗೆ’ ಎಂದು ಉಪಮುಖ್ಯಮಂತ್ರಿ, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನೆ ಮಾಡಿದ್ದಾರೆ.


‘ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎರಡೆರಡು ನ್ಯಾಯಾಲಯಗಳು ಛೀಮಾರಿ ಹಾಕಿ, ಲೋಕಾಯುಕ್ತ ಪೊಲೀಸರು ಎಫ್ಐಆರ್ ಹಾಕಿದ್ದರೂ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯಲಾಗದಂತಹ ನಿಮ್ಮಂತಹ ದುರ್ಬಲ ಕೆ.ಪಿ.ಸಿ.ಸಿ ಅಧ್ಯಕ್ಷರು ಬಹುಶಃ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲೇ ಇರಲಿಲ್ಲ. ಇಂತಹ ನಾಮಕಾವಸ್ತೆ ಅಧ್ಯಕ್ಷಗಿರಿ ಇಟ್ಟುಕೊಂಡು ಏನು ಮಾಡುತ್ತೀರಿ?’ ಎಂದು ವಾಗ್ದಾಳಿ ನಡೆಸಿದ್ದಾರೆ.


‘ಮನೇಲಿ ಇಲಿ ಬೀದೀಲಿ ಹುಲಿ’ ಎಂಬಂತೆ ನಿಮ್ಮ ಪೌರುಷ, ಅಬ್ಬರ ಮಾಧ್ಯಮಗಳ ಮುಂದೆ ಮಾತ್ರನಾ? ಅಥವಾ ಸಿದ್ದರಾಮಯ್ಯರನ್ನ ಇಳಿಸಿದರೆ ಅವರು ಕಾಂಗ್ರೆಸ್ ಪಕ್ಷವನ್ನೇ ಮುಳುಗಿಸಿ ಬಿಡುತ್ತಾರೆ ಎಂಬ ಭಯವೋ?’ ಎಂದು ಕುಟುಕಿದ್ದಾರೆ.

Join Whatsapp
Exit mobile version