ನಾವು ತಯಾರಾಗಿದ್ದೇವೆ ಎನ್.ಇ.ಪಿ ಬಗ್ಗೆ ಚರ್ಚೆಗೆ ನೀವು ತಯಾರಾಗಿದ್ದೀರಾ?: ಕ್ಯಾಂಪಸ್ ಫ್ರಂಟ್ ನಿಂದ ರಾಜ್ಯಾದ್ಯಂತ ಭಿತ್ತಿಪತ್ರ ಪ್ರದರ್ಶನ

Prasthutha|


ಬೆಂಗಳೂರು: ನಾವು ಚರ್ಚೆಗೆ ತಯಾರಾಗಿದ್ದೇವೆ. ನೀವು ತಯಾರಾಗಿದ್ದೀರಾ ಎಂಬ ಭಿತ್ತಿಪತ್ರ ಪ್ರದರ್ಶನವನ್ನು ರಾಜ್ಯಾದ್ಯಂತ ಜಿಲ್ಲಾ, ಯುನಿಟ್ ಮಟ್ಟದಲ್ಲಿ ಮಾಡುವ ಮುಖಾಂತರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ಪ್ರತಿಭಟಿಸಿದರು.

- Advertisement -


ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ , ಎನ್.ಇ.ಪಿ ಯಲ್ಲಿ ಲೋಪದೋಷಗಳಿದ್ದರೆ ಚರ್ಚೆಗೆ ಬನ್ನಿ ಎಂದು ಆಹ್ವಾನಿಸಿದ ಸವಾಲನ್ನು ಸ್ವೀಕರಿಸಿ ವಿದ್ಯಾರ್ಥಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.
ಬೆಂಗಳೂರು, ಮಂಗಳೂರು, ಕಲಬುರಗಿ, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ, ತಾಲೂಕುಗಳಲ್ಲಿ ವಿದ್ಯಾರ್ಥಿಗಳು ಭಿತ್ತಿಪತ್ರ ಪ್ರದರ್ಶಿಸಿದರು.


ಖಾಸಗೀಕರಣ, ಕೇಂದ್ರೀಕರಣ ಹಾಗೂ ಕೇಸರೀಕರಣಕ್ಕೆ ಒತ್ತನ್ನು ನೀಡುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ಇರುವ ಚರ್ಚೆಗೆ ಮುಕ್ತವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಿದ್ಧವಿದೆ, ಉನ್ನತ ಶಿಕ್ಷಣ ಸಚಿವರು ತಯಾರಾಗಿದ್ದೀರಾ? ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ಪ್ರಶ್ನಿಸಿದ್ದಾರೆ.



Join Whatsapp