Home ಟಾಪ್ ಸುದ್ದಿಗಳು ನಾವು ತಯಾರಾಗಿದ್ದೇವೆ ಎನ್.ಇ.ಪಿ ಬಗ್ಗೆ ಚರ್ಚೆಗೆ ನೀವು ತಯಾರಾಗಿದ್ದೀರಾ?: ಕ್ಯಾಂಪಸ್ ಫ್ರಂಟ್ ನಿಂದ ರಾಜ್ಯಾದ್ಯಂತ ಭಿತ್ತಿಪತ್ರ...

ನಾವು ತಯಾರಾಗಿದ್ದೇವೆ ಎನ್.ಇ.ಪಿ ಬಗ್ಗೆ ಚರ್ಚೆಗೆ ನೀವು ತಯಾರಾಗಿದ್ದೀರಾ?: ಕ್ಯಾಂಪಸ್ ಫ್ರಂಟ್ ನಿಂದ ರಾಜ್ಯಾದ್ಯಂತ ಭಿತ್ತಿಪತ್ರ ಪ್ರದರ್ಶನ


ಬೆಂಗಳೂರು: ನಾವು ಚರ್ಚೆಗೆ ತಯಾರಾಗಿದ್ದೇವೆ. ನೀವು ತಯಾರಾಗಿದ್ದೀರಾ ಎಂಬ ಭಿತ್ತಿಪತ್ರ ಪ್ರದರ್ಶನವನ್ನು ರಾಜ್ಯಾದ್ಯಂತ ಜಿಲ್ಲಾ, ಯುನಿಟ್ ಮಟ್ಟದಲ್ಲಿ ಮಾಡುವ ಮುಖಾಂತರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ಪ್ರತಿಭಟಿಸಿದರು.


ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ , ಎನ್.ಇ.ಪಿ ಯಲ್ಲಿ ಲೋಪದೋಷಗಳಿದ್ದರೆ ಚರ್ಚೆಗೆ ಬನ್ನಿ ಎಂದು ಆಹ್ವಾನಿಸಿದ ಸವಾಲನ್ನು ಸ್ವೀಕರಿಸಿ ವಿದ್ಯಾರ್ಥಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.
ಬೆಂಗಳೂರು, ಮಂಗಳೂರು, ಕಲಬುರಗಿ, ಹಾಸನ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ, ತಾಲೂಕುಗಳಲ್ಲಿ ವಿದ್ಯಾರ್ಥಿಗಳು ಭಿತ್ತಿಪತ್ರ ಪ್ರದರ್ಶಿಸಿದರು.


ಖಾಸಗೀಕರಣ, ಕೇಂದ್ರೀಕರಣ ಹಾಗೂ ಕೇಸರೀಕರಣಕ್ಕೆ ಒತ್ತನ್ನು ನೀಡುವ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ಇರುವ ಚರ್ಚೆಗೆ ಮುಕ್ತವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಿದ್ಧವಿದೆ, ಉನ್ನತ ಶಿಕ್ಷಣ ಸಚಿವರು ತಯಾರಾಗಿದ್ದೀರಾ? ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ ಪ್ರಶ್ನಿಸಿದ್ದಾರೆ.

Join Whatsapp
Exit mobile version