ಅರೇಹಳ್ಳಿ: ಕಾಡಾನೆ ದಾಳಿಗೆ ಮತ್ತೋರ್ವ ಮಹಿಳೆ ಸಾವು

- Advertisement -

- Advertisement -

ಹಾಸನ: ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ನಡೆದಿದೆ.

ಸುಶೀಲಮ್ಮ (63) ಮೃತ ಮಹಿಳೆ. 2 ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ ನಾಲ್ಕನೇ ಬಲಿ ಆಗಿದೆ.

- Advertisement -

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಸೊಂಡಲಿನಿಂದ ಮಹಿಳೆಯನ್ನು ಎತ್ತಿ ಬಿಸಾಡಿ, ಕಾಲಿನಿಂದ ತಲೆಯನ್ನು ತುಳಿದು ಸಾಯಿಸಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾಡಾನೆ ದಾಳಿಗೆ ಮಹಿಳೆ ಸಾವು ಖಂಡಿಸಿ ಚೀಕನಹಳ್ಳಿ-ಬೇಲೂರು ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಕಳೆದ 2 ತಿಂಗಳ ಅಂತರದಲ್ಲಿ ಕಾಡಾನೆ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ. ಹೀಗಾಗಿ ಕಾಡಾನೆ ಹಾವಳಿ ನಿಯಂತ್ರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

- Advertisement -


Must Read

Related Articles