ಕಾಶ್ಮೀರದಲ್ಲಿ ಗುಂಡಿನ ಕಾಳಗ: ಸೇನಾ ಕ್ಯಾಪ್ಟನ್ ಹುತಾತ್ಮ

Prasthutha|

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಎನ್‌ ಕೌಂಟರ್‌ ನಲ್ಲಿ ಸೇನಾ ಕ್ಯಾಪ್ಟನ್ ಹುತಾತ್ಮರಾಗಿದ್ದಾರೆ.

- Advertisement -

ಭಯೋತ್ಪಾದಕರ ಕಾರ್ಯಾಚರಣೆ ವೇಳೆ ನಡೆಸಿದ ದಾಳಿಯಲ್ಲಿ ಕ್ಯಾಪ್ಟನ್ ದೀಪಕ್ ಸಿಂಗ್ ವೀರ ಮರಣವನ್ನಪ್ಪಿದ್ದಾರೆ.

ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ವರದಿ ಆಧರಿಸಿ ಸೇನೆಯು ಸ್ಥಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸೇನೆಯೂ ಪ್ರತಿದಾಳಿ ನಡೆಸಿದೆ ಈ ವೇಳೆ ಕ್ಯಾಪ್ಟನ್ ದೀಪಕ್ ಸಿಂಗ್ ಅವರಿಗೆ ಗುಂಡು ತಗುಲಿ ಗಂಭೀರ ಗಾಯಗೊಂಡು ವೀರ ಮರಣ ಹೊಂದಿದ್ದಾರೆ.

- Advertisement -


ವರದಿಗಳ ಪ್ರಕಾರ, ನಾಲ್ಕು ಶಂಕಿತ ಭಯೋತ್ಪಾದಕರ ಗುಂಪು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿತು. ಈ ವೇಳೆ ಸ್ಥಳೀಯ ನಿವಾಸಿಯೊಬ್ಬರೂ ಗಾಯಗೊಂಡಿದ್ದಾರೆ.



Join Whatsapp