ರೈಫಲ್ ನಿಂದ ಆಕಸ್ಮಿಕ ಗುಂಡು ಹಾರಿದ ಪರಿಣಾಮ ಸೇನಾ ಯೋಧ ಮೃತ್ಯು

Prasthutha|

ಶ್ರೀನಗರ: ತನ್ನದೇ ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸೇನಾ ಯೋಧನೊಬ್ಬ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕಕ್ಕೆ ಸೇರಿದ ಯೋಧನ ಸರ್ವಿಸ್ ರೈಫಲ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾದರೂ, ಪ್ರಯೋಜನವಾಗಲಿಲ್ಲ. ಅವರು ಮೃತರಾಗಿದ್ದಾರೆ ಎಂದು ವೈದ್ಯರು ಘೋಷಿಸಿದರು ಅವರು ಹೇಳಿದ್ದಾರೆ.

ಘಟನೆ ಕುರಿತು ವಿಚಾರಣೆ ಪ್ರಕ್ರಿಯೆ ಆರಂಭಿಸಲಾಗಿದೆ.

Join Whatsapp
Exit mobile version