Home ಟಾಪ್ ಸುದ್ದಿಗಳು ಪಹಲ್ಗಾಮ್ ದಾಳಿ ಬೆನ್ನಲ್ಲೇ ಇಬ್ಬರು ಭಯೋತ್ಪಾದಕರನ್ನು ಹೊಡೆದುರಳಿಸಿದ ಸೇನೆ

ಪಹಲ್ಗಾಮ್ ದಾಳಿ ಬೆನ್ನಲ್ಲೇ ಇಬ್ಬರು ಭಯೋತ್ಪಾದಕರನ್ನು ಹೊಡೆದುರಳಿಸಿದ ಸೇನೆ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯನ್ನು (ಎಲ್‌ ಒಸಿ) ದಾಟಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಉರಿ ನಾಲಾ ಸ್ಥಳದಲ್ಲಿ ಭಯೋತ್ಪಾದಕರ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಸೇನೆ ಹೇಳಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ ಮಲ್ಲಿ ಮಾಹಿತಿ ಹಂಚಿಕೊಂಡಿರುವ ‘ಛಿನಾರ್‌ ಕಾರ್ಪ್ಸ್‌’ ಪಡೆ, 2025ರ ಏಪ್ರಿಲ್‌ 23ರಂದು 2–3 ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾ ಪ್ರದೇಶದ ಸರ್ಜೀವನ್‌ನಲ್ಲಿ ಗಡಿ ನುಸುಳಲು ಯತ್ನಿಸಿದ್ದರು. ಅವರನ್ನು ಎಲ್‌ಒಸಿ ಬಳಿ ಸೇನಾ ಪಡೆ ಹಿಮ್ಮೆಟ್ಟಿಸಿದ ಪರಿಣಾಮ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version