ನವದೆಹಲಿ : ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ಬಂಧಿತನಾಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ, ಬಿಜೆಪಿ ಬೆಂಬಲಿಗ ಪತ್ರಕರ್ತ ಅರ್ನಾಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಗೋಸ್ವಾಮಿಗೆ ಬಾಂಬೆ ಹೈಕೋರ್ಟ್ ನ.9ರಂದು ಜಾಮೀನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ, ಆತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ.
ಈ ಕುರಿತ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ರಾಜ್ಯ ಸರಕಾರದ ಕ್ರಮವನ್ನು ಟೀಕಿಸಿದೆ. ಅಲ್ಲದೆ, ಗೋಸ್ವಾಮಿಗೆ ಜಾಮೀನು ಮಂಜೂರು ಮಾಡಿದೆ ಎಂದು ‘ಬಾರ್ & ಬೆಂಚ್’ ವರದಿ ಮಾಡಿದೆ.
ಇಂಟಿರಿಯರ್ ಡಿಸೈನರ್ ಅನ್ವಯ್ ನಾಯ್ಕ್ ಮತ್ತು ಅವರ ತಾಯಿ ಕುಮುದ ನಾಯ್ಕ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆಪಾದನೆಯಲ್ಲಿ ಗೋಸ್ವಾಮಿ ಬಂಧಿತನಾಗಿದ್ದ.