ಏಕದಿನ ಕ್ರಿಕೆಟ್‌ಗೆ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರನ್ ಫಿಂಚ್ ವಿದಾಯ

Prasthutha|

ಕ್ಯಾನ್ಸ್‌: ಆಸ್ಟ್ರೇಲಿಯದ ಸೀಮಿತ ಓವರ್‌ಗಳ ತಂಡದ ನಾಯಕ ಆ್ಯರನ್ ಫಿಂಚ್‌ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಭಾನುವಾರ ನ್ಯೂಜಿಲೆಂಡ್‌ ವಿರುದ್ಧ ಮೂರನೇ ಪಂದ್ಯದ ಬಳಿಕ ಹಿರಿಯ ಆಟಗಾರ ಏಕದಿನ ಕ್ರಿಕೆಟ್‌ ವೃತ್ತಿ ಜೀವನವನ್ನು ಅಂತ್ಯಗೊಳಿಸಲಿದ್ದಾರೆ.

- Advertisement -

35 ವರ್ಷದ ಫಿಂಚ್‌, ಆಸ್ಟ್ರೇಲಿಯಾ ಪರ 145 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 39.14ರ ಸರಾಸರಿಯಲ್ಲಿ 5,401ರನ್ ಕಲೆಹಾಕಿದ್ದಾರೆ. ಈ ಪೈಕಿ 54 ಪಂದ್ಯಗಳಲ್ಲಿ ತಂಡ ಮುನ್ನಡೆಸಿದ್ದು 30 ಗೆಲುವು ತಂದುಕೊಟ್ಟಿದ್ದಾರೆ. ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಫಿಂಚ್‌ ಟಿ20 ಕ್ರಿಕೆಟ್‌ನಲ್ಲಿ ಮುಂದುವರಿಯಲಿದ್ದಾರೆ. 2015ರಲ್ಲಿ ವಿಶ್ವಕಪ್‌ ಗೆದ್ದ ತಂಡದ ಭಾಗವಾಗಿದ್ದ ಫಿಂಚ್‌ ಕಳೆದ ಕೆಲವು ದಿನಗಳಿಂದ ರನ್‌ ಗಳಿಸಲು ಪರದಾಡುತ್ತಿದ್ದಾರೆ. ಕಳೆದ 7 ಇನಿಂಗ್ಸ್‌ಗಳಲ್ಲಿ ಅವರ ಬ್ಯಾಟ್‌ನಿಂದ ಬಂದಿರುವುದು ಕೇವಲ 26 ರನ್‌ ಮಾತ್ರ.

ಫಿಂಚ್‌ ನಾಯಕತ್ವದಲ್ಲಿ ಆಸ್ಟ್ರೇಲಿಯ ತಂಡ ಕಳೆದ ವರ್ಷ ಯುಎಇ ಆತಿಥ್ಯದಲ್ಲಿ ನಡೆದಿದ್ದ 2021ರ ಟಿ20 ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು. ಅಕ್ಟೋಬರ್‌-ನವೆಂಬರ್‌ ಅವಧಿಯಲ್ಲಿ ತವರಿನಲ್ಲಿ ನಡೆಯುವ 2022ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಆಸ್ಟ್ರೇಲಿಯ ತಂಡವನ್ನು ಫಿಂಚ್‌ ಮುನ್ನಡೆಸಲಿದ್ದಾರೆ.

- Advertisement -

“ಕೆಲ ಅಸಾಧಾರಣ ನೆನಪುಗಳೊಂದಿಗೆ ಇದು ಅದ್ಭುತ ಪ್ರಯಾಣವಾಗಿದೆ. ಆಸ್ಟ್ರೇಲಿಯ ಏಕದಿನ ತಂಡದ ಭಾಗವಾಗಿರುವುದಕ್ಕೆ ನಾನು ತುಂಬಾ ಅದೃಷ್ಟಶಾಲಿಯಾಗಿದ್ದೇನೆ. ನನ್ನ ಜೊತೆ ಆಡಿದ ಮತ್ತು ತೆರೆಮರೆಯಲ್ಲಿ ನನಗೆ ಸದಾ ಪ್ರೋತ್ಸಾಹಿಸುತ್ತಿದ್ದ ಹಲವರು ನನ್ನನ್ನು ಆಶೀರ್ವದಿಸಿದ್ದಾರೆ,” ಎಂದು ಫಿಂಚ್ ತಮ್ಮ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp