ಕೊಡಗು: ಚೆಟ್ಟಳ್ಳಿ ಮಾರ್ಗದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಯಿಂದಾಗಿ ಮರ ಬಿದ್ದಿದ್ದ ಮರವನ್ನು ಅರಣ್ಯ ಇಲಾಖೆಯ 10 ಮಂದಿ ತಂಡ ತೆರವುಗೊಳಿಸಿದೆ. ಮರದ ಜೊತೆಗೆ ರಸ್ತೆ ಬದಿಗೆ ಬಿದ್ದಿದ್ದ ಮಣ್ಣನ್ನು ತೆರವುಗೊಳಿಸಿ, ಸುಗಮ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಇ ಇ ನಾಗರಾಜು ಅವರು ತಿಳಿಸಿದ್ದಾರೆ.
ಮಡಿಕೇರಿ-ಚೆಟ್ಟಳ್ಳಿ ಮಾರ್ಗದ ಅಭ್ಯಯಾಲದಲ್ಲಿ ಮರ ತೆರವು ಕಾರ್ಯವನ್ನು ಅರಣ್ಯ ಇಲಾಖೆಯ 10 ಮಂದಿಯ ತಂಡ ತೆರವುಗೊಳಿಸಿದ್ದಾರೆ. ಜೊತೆಗೆ ಲೋಕೋಪಯೋಗಿ ಇಲಾಖೆಯಿಂದ ಜೆಸಿಬಿ, ಟಿಪ್ಪರ್ ಮತ್ತು ಟ್ರ್ಯಾಕ್ಟರ್ ಮೂಲಕ ಮಣ್ಣು ತೆರವುಗೊಳಿಸಿ ಸಾರಿಗೆ ಸಂಚಾರಕ್ಕೆ ಯಾವುದೇ ರೀತಿಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಲಾಗಿದೆ ಎಂದು ನಾಗರಾಜು ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ಯಾವುದೇ ಭಾಗದಲ್ಲಿ ಸಾರಿಗೆ ಸಂಚಾರಕ್ಕೆ ವ್ಯತ್ಯಯ ಉಂಟಾಗದಂತೆ ತಾಲೂಕು ಹಂತದಲ್ಲಿ ವಿಶೇಷ ಗಮನ ಹರಿಸಲಾಗಿದೆ. ಅರಣ್ಯ, ಲೋಕೋಪಯೋಗಿ ಹಾಗೂ ಸೆಸ್ಕ್ ಇಲಾಖೆಗಳು ಜೊತೆಗೂಡಿ ಕಾರ್ಯನಿರ್ವಹಿಸುತ್ತಿವೆ ಎಂದು ನಾಗರಾಜು ಅವರು ಮಾಹಿತಿ ನೀಡಿದ್ದಾರೆ.