ಬಿಜೆಪಿ ಮುಖಂಡ ಈಶ್ವರಪ್ಪರನ್ನು ತಕ್ಷಣ ಬಂಧಿಸಿ: ದಿನೇಶ್ ಬೆಳ್ಳಾರೆ ಒತ್ತಾಯ

Prasthutha|

ಮಂಗಳೂರು: ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಲು ಯತ್ನಿಸಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಜೆಡಿಎಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ದಿನೇಶ್ ಬೆಳ್ಳಾರೆ ಆಗ್ರಹಿಸಿದ್ದಾರೆ.
ಈಶ್ವರಪ್ಪ ಅವರು ಈಗಾಗಲೇ ಸಚಿವ ಸಂಪುಟದಿಂದ ಹೊರದಬ್ಬಲ್ಪಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ದೊರೆಯುವ ವಿಶ್ವಾಸವಿಲ್ಲ. ಹೀಗಾಗಿ ಪಕ್ಷದ ವರಿಷ್ಠರನ್ನು ಮೆಚ್ಚಿಸಲು ಇಂತಹ ಉದ್ರೇಕಕಾರಿ ಹೇಳಿಕೆಗಳನ್ನು ನೀಡಿ ಜನರನ್ನು ಪ್ರಚೋದಿಸುತ್ತಿದ್ದಾರೆ. ಆದ್ದರಿಂದ ಅವರನ್ನು ತಕ್ಷಣ ಬಂಧಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ದಿನೇಶ್ ಬೆಳ್ಳಾರೆ ಆಗ್ರಹಿಸಿದ್ದಾರೆ.



Join Whatsapp