ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ರಾಷ್ಟ್ರೀಯ ಮಹಿಳಾ ಆಯೋಗವು ಕರ್ನಾಟಕ ಡಿಜಿಪಿಗೆ ಪತ್ರ ಬರೆದಿದೆ.
ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ.