ಕೇಂದ್ರದ ವಿರುದ್ಧ ಪ್ರತಿಭಟಿಸಿದ ದಸಂಸ ಕಾರ್ಯಕರ್ತರ ಬಂಧನ

Prasthutha|

ಮೈಸೂರು: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕರಪತ್ರ ಹಂಚುತ್ತಿದ್ದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರನ್ನು ಮೈಸೂರು ಪೊಲೀಸರು ಬಂಧಿಸಿದ ಘಟನೆ ಭಾನುವಾರ ನಡೆದಿದೆ.

- Advertisement -

ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಕೇಂದ್ರದ ಆಡಳಿತದ ವಿರುದ್ಧ ಕರಪತ್ರ ಹಂಚಲಾಗುತ್ತಿತ್ತು. ಈ ವೇಳೆ ಅವರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ಮೂರು ಕೃಷಿ ಕಾಯ್ದೆಗಳು, ಗೋ ಸಂರಕ್ಷಣಾ ಕಾಯ್ದೆ, ಬ್ಯಾಂಕ್ ಗಳ ವಿಲೀನದಿಂದ ಉದ್ಯೋಗ ಕುಸಿತ, ವಿದ್ಯುತ್‌ ಖಾಸಗೀಕರಣ, ರಾಷ್ಟ್ರೀಯ ಶಿಕ್ಷಣ ನೀತಿ-2020, ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆಯಂತಹ ಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.

- Advertisement -

ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ. ಇದರಿಂದ ಕಾರ್ಪೊರೇಟ್‌ ಕುಳಗಳು ಮಾತ್ರ ಬೆಳೆಯುತ್ತಿದ್ದಾರೆ. ಈ ನೀತಿಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.

Join Whatsapp