ಐಎಎಸ್ ಅಧಿಕಾರಿ ಮಂಜುನಾಥ್ ಬಂಧನ ಸರಿಯಲ್ಲ; ಎಸಿಬಿ ವಿರುದ್ಧ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ

Prasthutha|

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಅವರನ್ನು ಕಚೇರಿಯ ಯಾರೋ ಸಿಬ್ಬಂದಿ ಮಾಡಿರುವ ತಪ್ಪುನ್ನು ಗುರಿಯಾಗಿಸಿ ಭ್ರಷ್ಟಾಚಾರ ನಿಗ್ರಹ ದಳ ಎಸಿಬಿ ಬಂಧಿಸಿರುವ ಕ್ರಮ ಸರಿಯಲ್ಲ. ಅದು ನಡೆದುಕೊಂಡ ಕ್ರಮ ಅತ್ಯಂತ ಖಂಡನೀಯ ಎಂದು ಅನುಸೂಚಿತ ಜಾತಿ, ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಪಿ.ಕುಮಾರ ಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮಂಜುನಾಥ್ ಈ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಕ್ಷ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಕೆಲವರು ಕುತಂತ್ರ ನಡೆಸಿ ಯಾರೋ ಮಾಡಿದ ತಪ್ಪಿಗೆ ಎಸಿಬಿ ಬಂಧನ ಮಾಡಿರುವುದು ಸರಿಯಲ್ಲ. ಇತೀಚೆಗೆ ಗೌರವಾನ್ವಿತ ನ್ಯಾಯಮೂರ್ತಿ ಗಳು ಎಸಿಬಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಒಬ್ಬ ಜಿಲ್ಲಾಧಿಕಾರಿ ನಡೆಸಿದ ಕುತಂತ್ರಕ್ಕೆ ಎಸಿಬಿ ಬಲಿ ಹಾಕಿರುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಇದುವರೆಗೆ ಬೆಂಗಳೂರು ಸೇರಿದಂತೆ ಅನೇಕ ಕಡೆ ಭ್ರಷ್ಟಾಚಾರವೆಸಗಿದ ಅಧಿಕಾರಿಗಳ ಮೇಲೆ ಯಾವ ಕ್ರಮ ಕೈಗೊಂಡಿದೆ ಎಂಬುದು ಪ್ರಶ್ನಾರ್ಹವಾಗಿದೆ. ಕೇವಲ ದುರ್ಬಲ ವರ್ಗಗಳ ಅಧಿಕಾರಿಗಳನ್ನು ಗುರಿಯಾಗಿಸಿ ದಾಳಿ ನಡೆಸಿ ಅವರ ಮೇಲೆ ಕ್ರಮ ಕೈ ಗೊಳ್ಳುತ್ತಿರುವುದು ಎಷ್ಟರಮಟ್ಟಿಗೆ ಸರಿ. ಇಡೀ ಸಾರ್ವಜನಿಕ ವಲಯವೇ ಎಸಿಬಿ ಕಾರ್ಯನಿರ್ವಹಣೆ ಕುರಿತು ಅಸಮಾಧಾನ ಹೊಂದಿದ್ದಾರೆ ಎಂದು ಎಸಿಬಿ ವಿರುದ್ಧ ಆಕ್ರೋಶ ಹಾರ ಹಾಕಿದ್ದಾರೆ.

Join Whatsapp