Home ಟಾಪ್ ಸುದ್ದಿಗಳು ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಂಧನ; ಎಂಟು ಮಂದಿ ಪೊಲೀಸ್ ವಶಕ್ಕೆ

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಂಧನ; ಎಂಟು ಮಂದಿ ಪೊಲೀಸ್ ವಶಕ್ಕೆ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆ ಕಾರ್ಯಾಚರಣೆಯಲ್ಲಿ ಆಫ್ರಿಕಾ ಮೂಲದ ಒಬ್ಬನ ಸಹಿತ, ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಪಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು,  ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ಏಳು ಮಂದಿಯನ್ನು ವಶಕ್ಕೆ ಪಡೆದು ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Join Whatsapp
Exit mobile version