ಕರಸೇವಕರ ಬಂಧನ | ದ್ವೇಷ ರಾಜಕಾರಣ ಮಾಡಲ್ಲ: ಸಿಎಂ ಸಿದ್ದರಾಮಯ್ಯ

Prasthutha|

ಕೊಪ್ಪಳ: ಹುಬ್ಬಳ್ಳಿಯ ಗಲಭೆಯಲ್ಲಿ ಭಾಗಿಯಾದ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

- Advertisement -

ಕೊಪ್ಪಳದ ಬಸಾಪುರ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 30 ವರ್ಷಗಳ ಹಿಂದಿನ ಬಾಕಿ ಉಳಿದಿರುವ ಪ್ರಕರಣಗಳನ್ನು ವಿಲೇವಾರಿ ಮಾಡಲು ಸೂಚಿಸಲಾಗಿದೆ. ಹೈಕೋರ್ಟ್ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಪೊಲೀಸರು ಹಲವು ಪ್ರಕರಣಗಳಲ್ಲಿ ಭಾಗಿಯಾದವರನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ ಎಂದರು.

Join Whatsapp