ನಕಲಿ ಆಧಾರ್ ಕಾರ್ಡ್ ಬಳಸಿ ಭಾರತ ಪ್ರವೇಶಿಸಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ

Prasthutha|

ಬೆಂಗಳೂರು: ಒಂದು ವರ್ಷದ ಹಿಂದೆ ಬಾಂಗ್ಲಾ ದೇಶದಿಂದ‌ ನಕಲಿ‌ ಆಧಾರ್ ಬಳಸಿ ಭಾರತಕ್ಕೆ ಅಕ್ರಮವಾಗಿ ಬಂದು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಬೆಂಗಳೂರು ಪೋಲಿಸರು ಬಂಧಿಸಿದ್ದಾರೆ. ಅವರು ಪಶ್ಚಿಮ ಬಂಗಾಳ ಮೂಲಕ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದರು.

- Advertisement -

ಮೊಹಮ್ಮದ್ ರಫೀಕ್, ಸೈಫುಲಾ ಅಕ್ತರ್ , ಮೊಹಮ್ಮದ್ ಮುಫೀಝ್ ಶೇಕ್ ಬಂಧಿತರು. ಏಜೆಂಟ್‌ಗಳು ನಕಲಿ ಆಧಾರ್ ಕಾರ್ಡ್ ಮಾಡಿಸಿ ಕೊಟ್ಟಿದ್ದು, ಅದನ್ನು ಬಳಸಿ ಭಾರತಕ್ಕೆ ಬಂದಿದ್ದರು.

ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

Join Whatsapp