ನಕಲಿ ವೈದ್ಯಕೀಯ ಪ್ರಮಾಣಪತ್ರಗಳನ್ನು ತಯಾರಿಸುತ್ತಿದ್ದ ಇಬ್ಬರ ಬಂಧನ

Prasthutha|

ಬೆಳಗಾವಿ: ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ವೈದ್ಯಕೀಯ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪದ ಮೇಲೆ ಇಬ್ಬರನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ.

- Advertisement -

ಖಾನಾಪುರದಲ್ಲಿ ನಕಲಿ ವೈದ್ಯಕೀಯ ಪ್ರಮಾಣ ಪತ್ರ ತಯಾರಿಸುವ ಜಾಲ ಬೆಳಕಿಗೆ ಬಂದಿತ್ತು. ಮಂಗಳವಾರ ಮಂಡೆಗಾಳಿ ಗ್ರಾಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ್ ನಾಂದ್ರೆ ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಇಸ್ಮಾಯಿಲ್ ಬಿಡಿಕರ್ ಮತ್ತು ವಾಸು ಗುರುವ್ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಸ್ಮಾಯಿಲ್ ಖಾನಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.

- Advertisement -

ಸಂಧ್ಯಾ ಸುರಕ್ಷಾ, ವಿಧವಾ ವೇತನ ಮತ್ತು ಇತರ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸರ್ಕಾರವು ವೈದ್ಯಕೀಯ ವರದಿಗಳನ್ನು ಕಡ್ಡಾಯಗೊಳಿಸಿದೆ.

Join Whatsapp