ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ: ತಹಶೀಲ್ದಾರ್ ಅಜಿತ್ ರೈ ಬಂಧಿಸಿದ ಲೋಕಾಯುಕ್ತ ಪೊಲೀಸರು

Prasthutha|

- Advertisement -

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವ ಹಿನ್ನೆಲೆ ಕೆಆರ್​ ಪುರ ತಹಶೀಲ್ದಾರ್ ಅಜಿತ್​ ರೈ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಬೆಳಗ್ಗೆ ಅಜಿತ್ ರೈ ನಿವಾಸದ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಸತತ 30 ಗಂಟೆಗಳ ಶೋಧ ನಡೆಸಿ ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವುದು ಕಂಡು ಬಂದ ಹಿನ್ನೆಲೆ ಅಜಿತ್ ರೈ ಅವರನ್ನು ಬಂಧಿಸಲಾಗಿದ್ದು, 24 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.