Home ಟಾಪ್ ಸುದ್ದಿಗಳು ಬಂಧಿತ PFI ನಾಯಕನಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿಲ್ಲ: ಪೊಲೀಸ್ ಸ್ಪಷ್ಟನೆ

ಬಂಧಿತ PFI ನಾಯಕನಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿಲ್ಲ: ಪೊಲೀಸ್ ಸ್ಪಷ್ಟನೆ

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಎನ್ ಐಎ ಬಂಧಿಸಿದ ನಿಷೇಧಿತ ಪಿಎಫ್ ಐ ಸಂಘಟನೆಯ ನಾಯಕ ಅಬ್ದುಲ್ ಸಲೀಂ ಅವರಿಗೂ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.


ಅಬ್ದುಲ್ ಸಲೀಂ ಅವರನ್ನು ಎನ್ ಐಎ ಅಧಿಕಾರಿಗಳು ಬಂಧಿಸಿರುವುದನ್ನು ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ತಳುಕು ಹಾಕಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.


ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಡಪ ಪೊಲೀಸರು, ತೆಲಂಗಾಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಲೀಂನನ್ನು ಬಂಧಿಸಲಾಗಿದೆ. ಬೆಂಗಳೂರಿನ ಸ್ಫೋಟ ಪ್ರಕರಣಕ್ಕೂ ಈ ಬಂಧನಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರು ಪೊಲೀಸರು ಕೂಡಾ ಇದನ್ನು ಧೃಡಪಡಿಸಿದ್ದಾರೆ ಎಂದು ಆಲ್ಟ್ ನ್ಯೂಸ್ ನ ಮಹಮ್ಮದ್ ಝುಬೈರ್ ಅವರು ಟ್ವೀಟ್ ಮಾಡಿದ್ದಾರೆ.

Join Whatsapp
Exit mobile version