ಕಳೆದ ಮೂರು ವರ್ಷಗಳಲ್ಲಿ UAPA ಅಡಿಯಲ್ಲಿ ಬಂಧಿತರಾದವರ ಸಂಖ್ಯೆ ಎಷ್ಟು ಗೊತ್ತೇ?

Prasthutha: December 22, 2021

ಹೊಸದಿಲ್ಲಿ: ದೇಶದ ವಿವಿಧ ಭಾಗಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ)ಅಡಿಯಲ್ಲಿ 4,690 ಜನರನ್ನು ಬಂಧಿಸಲಾಗಿದೆ. ಈ ಪೈಕಿ 149 ಜನರು ಅಪರಾಧಿಗಳು ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.

‘1,421 ಜನರನ್ನು 2018ರಲ್ಲಿ ಯುಎಪಿಎ ಅಡಿಯಲ್ಲಿ ಬಂಧಿಸಲಾಗಿದೆ. 2019ರಲ್ಲಿ 1,948 ಮತ್ತು 2020 ರಲ್ಲಿ 1,321 ಜನರನ್ನು ಬಂಧಿಸಲಾಗಿದೆ. ಇದರಲ್ಲಿ 2018ರಲ್ಲಿ 35 ಜನರು ಅಪರಾಧಿಗಳಾಗಿದ್ದು, 2019ರಲ್ಲಿ 34 ಮತ್ತು 2020ರಲ್ಲಿ 80 ಜನರು ಅಪರಾಧಿಗಳಾಗಿದ್ದಾರೆ’ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

‘ಕಾನೂನಿನ ದುರುಪಯೋಗವನ್ನು ತಡೆಗಟ್ಟಲು ಕೂಡ ಯುಎಪಿಎ ಅಡಿಯಲ್ಲಿಯೇ ಅಂತರ್ಗತ ಸುರಕ್ಷತೆಗಳು ಸೇರಿದಂತೆ ಸಾಕಷ್ಟು ಸಾಂವಿಧಾನಿಕ, ಸಾಂಸ್ಥಿಕ ಮತ್ತು ಶಾಸನಬದ್ಧ ಕ್ರಮಗಳು ಸೇರಿವೆ’ ಎಂದು ಅವರು ಹೇಳಿದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!