‘ಬಿಗ್ ಬಾಸ್’ ಸ್ಟುಡಿಯೋದಲ್ಲಿ ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ

Prasthutha|

ಮುಂಬೈ: ಬಾಲಿವುಡ್ನ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಅವರು ಬುಧವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಮುಂಬೈನಲ್ಲಿರುವ ತಮ್ಮ ಒಡೆತನದ ಎನ್ ಡಿ ಸ್ಟುಡಿಯೋಸ್ ನಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎನ್ ಡಿ ಸ್ಟುಡಿಯೋದಲ್ಲಿ ಬಿಗ್ ಬಾಸ್ ವೀಕೆಂಡ್ ಎಪಿಸೋಡ್ ಶೂಟ್ ಮಾಡಲಾಗುತ್ತಿತ್ತು. ಆಗಸ್ಟ್ 9ರಂದು ಅವರು ಬರ್ತ್ಡೇ ಆಚರಿಸಿಕೊಳ್ಳಬೇಕಿತ್ತು. ಅದಕ್ಕೂ ಮೊದಲೇ ಅವರು ಪ್ರಾಣ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಸದ್ಯ ಪೊಲೀಸರು ಇಲ್ಲಿಗೆ ಆಗಮಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ನಿತಿನ್ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.

ನಿತಿನ್ ದೇಸಾಯಿ ಅವರ ಸಾವು ಅನೇಕರಿಗೆ ಶಾಕ್ ಮೂಡಿಸಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯಾವ ವಿಚಾರ ಕಾರಣ ಆಯಿತು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ನಿತಿನ್ ದೇಸಾಯಿ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
‘ಹಮ್ ದಿಲ್ ದೇ ಚುಕೆ ಸನಮ್’, ‘ದೇವದಾಸ್’, ‘ಜೋಧಾ ಅಕ್ಬರ್’ ಹಾಗೂ ‘ಲಗಾನ್’ ಮೊದಲಾದ ಸಿನಿಮಾಗಳಿಗೆ ನಿತಿನ್ ಅವರು ಸೆಟ್ ನಿರ್ಮಾಣ ಮಾಡಿದ್ದರು. ವಿಧು ವಿನೋದ್ ಚೋಪ್ರಾ ನಿರ್ದೇಶನದ ‘1942: ಎ ಲವ್ ಸ್ಟೋರಿ’ ಸಿನಿಮಾದ ಸೆಟ್ ಸಾಕಷ್ಟು ಗಮನ ಸೆಳೆದಿತ್ತು.

Join Whatsapp