ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ತೆರಳುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Prasthutha|

ಚೆನ್ನೈ: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ರವಿಶಂಕರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್, ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ ಗ್ರಾಮವೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಅದರಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.


ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಈರೋಡ್’ನ ಸತ್ಯಮಂಗಳಂನ ಉಗಿನಿಯಂ ಗ್ರಾಮದ ಸರ್ಕಾರಿ ಶಾಲೆಯ ಕ್ಯಾಂಪಸ್’ನಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ರವಿಶಂಕರ್ ಅವರು ತಿರುಪ್ಪೂರ್’ಗೆ ತೆರಳುತ್ತಿದ್ದಾಗ ಈ ಘಟನೆ ನಡದಿದೆ. ಹವಾಮಾನ ಸಹಜಸ್ಥಿತಿಗೆ ಬಂದ ನಂತರ ಸುಮಾರು 40 ನಿಮಿಷಗಳ ಬಳಿಕ ಹೆಲಿಕಾಪ್ಟರ್ ಅಲ್ಲಿಂದ ಪ್ರಯಾಣ ಮುಂದುವರಿಸಿದೆ ಎಂದು ತಿಳಿದುಬಂದಿದೆ.

- Advertisement -