Home ಟಾಪ್ ಸುದ್ದಿಗಳು 370 ರದ್ದು, ಸುಪ್ರೀಂ ಕೋರ್ಟ್ ಇಂದು ತೀರ್ಪು: ಮುಫ್ತಿಗೆ ಗೃಹಬಂಧನ

370 ರದ್ದು, ಸುಪ್ರೀಂ ಕೋರ್ಟ್ ಇಂದು ತೀರ್ಪು: ಮುಫ್ತಿಗೆ ಗೃಹಬಂಧನ

ಶ್ರೀನಗರ: ಶ್ರೀನಗರ: 2019 ರಲ್ಲಿ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದುಮಾಡುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿತ್ತು. ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದವು. ಹಲವು ಸುತ್ತಿನ ವಾದ-ವಿವಾದಗಳ ನಂತರ ಇಂದು ಸೋಮವಾರ ಸುಪ್ರೀಂ ಕೋರ್ಟ್ ಈ ವಿಷಯಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಿದೆ.

ಈ ಹಿನ್ನೆಲೆಯಲ್ಲಿ ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸುವ ಮುನ್ನವೇ, ಪೊಲೀಸರು ಮೆಹಬೂಬಾ ಮುಫ್ತಿ ಅವರ ನಿವಾಸದ ಬಾಗಿಲುಗಳನ್ನು ಮುಚ್ಚಿ, ಗೃಹಬಂಧನದಲ್ಲಿ ಇರಿಸಿದ್ದಾರೆ ಎಂದು ಪಕ್ಷವು ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಈ ನಡುವೆ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ನಿವಾಸದ ಬಳಿ ಪತ್ರಕರ್ತರಿಗೆ ಬರಲು ಪೊಲೀಸರು ಅವಕಾಶ ನೀಡಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version