ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿ: ಫಾರೂಕ್ ಅಬ್ದುಲ್ಲಾ ಭರವಸೆ

Prasthutha|

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯದಲ್ಲಿ ಮತ್ತೆ ಆರ್ಟಿಕಲ್ 370 ಸ್ಥಾಪಿಸುವುದಾಗಿ ಅಲ್ಲಿನ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಭರವಸೆ ಕೊಟ್ಟಿದ್ದಾರೆ.

- Advertisement -

370ನೇ ವಿಧಿಯನ್ನು ರದ್ದು ಮಾಡಲು ಬಿಜೆಪಿ 31 ವರ್ಷಗಳ ಕಾಲ ತೆಗೆದುಕೊಂಡರೆ, ನಾವು ಅದನ್ನು ಮರಳಿ ತರಲು ಸಿದ್ಧರಿದ್ದೇವೆ. ಆರ್ಟಿಕಲ್ 370 ಮತ್ತು 35-ಎ ಕಣಿವೆ ರಾಜ್ಯದ ಜನರ ಹೃದಯ ಬಡಿತವಾಗಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇತ್ತೀಚೆಗೆ ಬಿಜೆಪಿ ಅಧಿಕಾರದಲ್ಲಿ ಇರುವವರೆಗೆ 370 ನೇ ವಿಧಿಯನ್ನು ಮತ್ತೆ ಜಾರಿ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ಎನ್ನುವಂತೆ ಫಾರೂಕ್ ಅಬ್ದುಲ್ಲಾ ಹೇಳಿಕೆ ಬಂದಿದೆ. ರಾಜ್ಯದಲ್ಲಿ 370ನೇ ವಿಧಿಯನ್ನು ಮರುಸ್ಥಾಪನೆ ಮಾಡಲು ಹಲವು ವರ್ಷಗಳು ಬೇಕಾಗಬಹುದು. ಆದರೆ ನಾವು ಅದನ್ನು ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.



Join Whatsapp
Exit mobile version