ಯಾನೆಪೋಯ ಯೂತ್ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳ ದೇಣಿಗೆಯಿಂದ ಕೃತಕ ಕಾಲುಗಳ ನೆರವು

Prasthutha|

ಮಂಗಳೂರು: ವಿದ್ಯಾರ್ಥಿಗಳು ತಾವು ದೇಣಿಗೆ ನೀಡುವ ಮೂಲಕ ಕೃತಕ ಕಾಲುಗಳನ್ನು ನೀಡಿರುವುದು  ಇತರರಿಗೆ ಮಾದರಿ ಎಂದು  ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಶ್ಲಾಘಿಸಿದ್ದಾರೆ.

- Advertisement -

ಅವರು ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿಂದು ಯಾನೆಪೋಯ ಕಾಲೇಜಿನ ಯೂತ್ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ನೀಡಿದ ದೇಣಿಗೆಯ ವತಿಯಿಂದ ಫಲಾನುಭವಿ ಪಡೀಲ್ ನ  ಕಲಾವಿದ (ಗಾಯಕ) ಪ್ರಕಾಶ್ ಸಪಲ್ಯರವರಿಗೆ ವೈದ್ಯರ ಮೂಲಕ ಕೃತಕ ಕಾಲುಗಳನ್ನು ಹಸ್ತಾಂತರಿಸಿ ಮಾತನಾಡುತ್ತಿದ್ದರು.

ಈ ರೀತಿಯ ಕೆಲಸಗಳು ಇತರರಿಗೂ ಪ್ರೇರಣೆಯಾಗಲಿ. ಸಮಾಜಮುಖಿ ಚಟುವಟಿಕೆಗಳು ಜಿಲ್ಲೆಯಲ್ಲಿ ಇನ್ನೂ ನಿರಂತರವಾಗಿ ನಡೆಯುವಂತಾಗಲಿ ಇದರಿಂದ ಇನ್ನಷ್ಟು ಜನರಿಗೆ ಸಹಾಯ ದೊರೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಪ್ರೋತ್ಸಾಹಿಸಿದರು.

- Advertisement -

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸದಾಶಿವ ಶ್ಯಾನ್ ಬೋಗ್, ಇಂಡಿಯನ್ ರೆಡ್ ಕ್ರಾಸ್ ಸಭಾಪತಿ ಸಿ.ಎ.ಶಾಂತರಾಮ ಶೆಟ್ಟಿ, ಯಾನೆಪೋಯ ಕಾಲೇಜಿನ ಪ್ರಾಂಶುಪಾಲ ಅರುಣ್ ಭಾಗವತ್, (ಯಾನೆಪೋಯ ಪರಿಗಣಿತ ವಿಶ್ವ ವಿದ್ಯಾನಿಲಯದ)ವೈಐಎಎಸ್ ಸಿಎಂ ಮತ್ತು ಯುವ ರೆಡ್ ಕ್ರಾಸ್ ಘಟಕದ ನೋಡಲ್ ಅಧಿಕಾರಿ ನಿತ್ಯಶ್ರೀ, ಕಾರ್ಯಕ್ರಮ ಸಂಯೋಜನಾಧಿಕಾರಿ ಜ್ಯೋತಿ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ವೆನ್ಲಾಕ್ ಆಸ್ಪತ್ರೆಯ ವೈದ್ಯರಾದ ಡಾ.ಕೆ.ಆರ್ ಕಾಮತ್, ಕೃತಕ ಅಂಗ ಜೋಡಿಸಿದ ಡಾ.ಆಶಿತ್ ಠಾಕೂರ್, ಯುವ ರೆಡ್ ಕ್ರಾಸ್ ಘಟಕದ ಸದಸ್ಯರು, ಇಂಡಿಯನ್ ರೆಡ್ ಕ್ರಾಸ್ ಘಟಕದ ಹಿರಿಯ ಸಲಹೆಗಾರರು ಮಾಜಿ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ, ಇಂಡಿಯನ್ ರೆಡ್ ಕ್ರಾಸ್ ದ.ಕ ಜಿಲ್ಲಾ ಘಟಕದ ಹಿರಿಯ ಸದಸ್ಯರಾದ ರವೀಂದ್ರನಾಥ ಉಚ್ಚಿಲ್ ಮೊದಲಾದವರು ಉಪಸ್ಥಿತರಿದ್ದರು.

Join Whatsapp
Exit mobile version