ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ: ಕಲಾವಿದ ಸಾವು

Prasthutha|

ಮಂಡ್ಯ: ಬೆಂಗಳೂರು– ಮೈಸೂರು ಎಕ್ಸ್ ಪ್ರೆಸ್ ವೇ, ತಾಲ್ಲೂಕಿನ ಯಲಿಯೂರು ಬಳಿ ಶನಿವಾರ ನಸುಕಿನ ವೇಳೆ ನಡೆದ ಅಪಘಾತದಲ್ಲಿ ಯುವ ಚಿತ್ರಕಲಾ ಕಲಾವಿದ, ನಟ ಲೋಕೇಶ್ (38) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -


ಕೈ ಕಾಲು ತುಂಡಾದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಅವರು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಗುಂಡ್ಲುಪೇಟೆ ತಾಲೂಕಿನ ದೊಡ್ಡತುಪ್ಪೂರು ಗ್ರಾಮದವರಾದ ಲೋಕೇಶ್ ಹಲವು ಕಲಾ ನಿರ್ದೇಶಕರ ಬಳಿ ಕೆಲಸ ಮಾಡಿದ್ದರು. ಅಮೂಲ್ಯ ರತ್ನ ಕಿರುಚಿತ್ರ ಹಾಗೂ ಫ್ಯಾಮಿಲಿ ಪ್ಯಾಕ್ ಚಲನಚಿತ್ರದಲ್ಲಿ ಅವರು ಅಭಿನಯಿಸಿದ್ದರು.

Join Whatsapp