ತಲ್ವಾರ್ ಗಳಿಗೆ ಪೂಜೆ ಮಾಡಿ: ಅರುಣ್ ಪುತ್ತಿಲ ವಿವಾದಾತ್ಮಕ ಹೇಳಿಕೆ ವಿರುದ್ಧ ಸುಮೋಟೋ ಕೇಸು

Prasthutha|

- Advertisement -

ಶಿವಮೊಗ್ಗ: ಹಿಂದೂಗಳು ಮನೆಯಲ್ಲಿ ತಲ್ವಾರ್ ಒಟ್ಟುಕೊಳ್ಳಬೇಕು, ಆಯುಧ ಪೂಜೆ ದಿನ ಪೂಜೆ ಮಾಡಿ ಉತ್ತರ ನೀಡುವ ಸಂದರ್ಭ ಬರಬಹುದು ಎಂದು ಪುತ್ತಿಲ ಪರಿವಾರದ ಅರುಣ್ ಪುತ್ತಿಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅವರ ಹೇಳಿಕೆ ವಿರುದ್ಧ ಇದೀಗ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿದೆ.

- Advertisement -

ನಗರದ ರಾಗಿಗುಡ್ಡಕ್ಕೆ ಶುಕ್ರವಾರ ಭೇಟಿ ನೀಡಿದ ಅವರು ಸಂತ್ರಸ್ತರ ಮನೆಗಳಿಗೆ ತೆರಳಿ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ,ಅನೇಕ ರೀತಿಯ ದಾಳಿ, ನೋವು ಅಪಮಾನದ ನಡುವೆ ಹಿಂದೂ ಸಮಾಜ ರಕ್ಷಣೆ ಮಾಡಬೇಕಿದೆ. ಸರಕಾರ ತಲ್ವಾರ್ ಹಿಡಿದು ಮೆರವಣಿಗೆಗೆ ಅವಕಾಶ ಕೊಡುತ್ತಾರೆಂದರೆ ಮಾರಕಾಸ್ತ್ರ ಹಿಡಿದು ಹಿಂದು ಸಮಾಜದ ಮೇಲೆ, ಹಿಂದೂ‌ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಸಹಕಾರ ಕೊಡುತ್ತಾರೆ. ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದು ಸಮಾಜ ಸಿದ್ದವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕ್ಯೂಡ್ರೈವರ್, ಸ್ಯ್ಪಾನರ್ ಕೈ ಬಿಡಿ ತಲ್ವಾರ್ ಗಳಿಗೆ ಪೂಜೆ ಮಾಡಿ ಎಂದರು.

Join Whatsapp